ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್ ದೃಢಪಟ್ಟಿದೆ. ಆದರೆ ಚರಣ್ಜಿತ್ ಅವರಿಗೆ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ.
ಚನ್ನಿ ಅವರ ಪತ್ನಿ ಕಮಲಜಿತ್ ಕೌರ್, ಪುತ್ರ ನವಜಿತ್ ಸಿಂಗ್ ಮತ್ತು ಸಿಮ್ರಾನ್ ಧೀರ್ ಕೌರ್ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಮೊಹಲಿ ಸಿವಿಲ್ ಸರ್ಜನ್ ಡಾ. ಆದರ್ಶಪಾಲ್ ಕೌರ್ ಮಾಹಿತಿ ನೀಡಿದ್ದಾರೆ. ಅವರಿಗೆಲ್ಲರಿಗೂ ಸೌಮ್ಯ ರೋಗಲಕ್ಷಣಗಳು ಕಂಡುಬಂದಿದ್ದು, ಮನೆಯಲ್ಲೇ ಪ್ರತ್ಯೇಕವಾಗಿ ವಾಸವಾಗಿದ್ದಾರೆ.










