ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾಗ ಕುಟುಂಬದಿಂದ ಯಾರನ್ನೂ ಸ್ಪರ್ಧೆಗೆ ಇಳಿಸಲ್ಲ : ಹೆಚ್.ಡಿ ಕುಮಾರಸ್ವಾಮಿ.

51
firstsuddi

ರಾಯಚೂರು : ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾಗ, ಕುಟುಂಬದಿಂದ ಯಾರನ್ನೂ ಸ್ಪರ್ಧೆಗೆ ಇಳಿಸಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಹಾಸನದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ರಾಯಚೂರಿನ ಕಲ್ಮಲಾ ಗ್ರಾಮದಲ್ಲಿಂದು ಮಾತನಾಡಿದ ಅವರು, ನಾಲ್ವರು ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಿದ್ದೇವೆ. ನಾಲ್ಕು-ಐದು ಜನ ಹೇಳಿದ ತಕ್ಷಣ ಅವರು ಹೇಳಿದಂತೆ ಆಗಲ್ಲ. ಕೆಲವರಿಗೆ ವೈಯಕ್ತಿಕ ಪ್ರೀತಿ ವಿಶ್ವಾಸವಿರುತ್ತೆ. ಹಾಗಾಗಿ, ಅಭಿಮಾನದಿಂದ ಮಾತನಾಡಿದ್ದಾರೆ. ಅಭಿಮಾನದಿಂದ ಮಾತನಾಡಿದ್ದು ಎಲ್ಲಾ ಅಭಿಪ್ರಾಯವೆಂದು ತೀರ್ಮಾನಿಸಲು ಆಗಲ್ಲ. ಇನ್ನುಳಿದಿದ್ದು ಮನೆಯಲ್ಲಿ ಕುಳಿತು ಮತ್ತು ಪಕ್ಷದ ಚೌಕಟ್ಟಿನಲ್ಲಿ ಕುಳಿತು ತೀರ್ಮಾನ ಮಾಡುತ್ತೇವೆ ಎಂದರು.

ಕುಮಾರಸ್ವಾಮಿ ಕುಟುಂಬದಲ್ಲಿ ಭಿನ್ನಾಭಿಪ್ರಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಬರಲ್ಲ. ಯಾವುದೇ ರೀತಿಯ ಸಂಘರ್ಷವೂ ಆಗಲ್ಲ. ಯಾರೂ ಕುತೂಹಲ, ಆತಂಕಕ್ಕೆ ಒಳಗಾಗೋದು ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.