ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ – ಆರು ಮಂದಿ ಸಾವು, ಹತ್ತು ಮಂದಿಗೆ ಗಂಭೀರ ಗಾಯ…

59
firstsuddi

ಚೆನ್ನೈ : ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂ ಪಟ್ಟಣದ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಅಗ್ನಿ ಅವಘಡ ನಡೆದಿದೆ ಎಂದು ಹೇಳಲಾಗುತ್ತಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚಿನ ಪಟಾಕಿ ದಾಸ್ತಾನು ಮಾಡಿ, ಮಾರಾಟ ಮಾಡಲಾಗುತ್ತಿತು. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಪಕ್ಕದ ಬೇಕರಿ ಅಂಗಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡಿದೆ. ಎರಡು ಗಂಟೆಗಳ ಕಾಲ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯನಿರ್ವಹಿಸಿ, ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ 10ಕ್ಕೂ ಹೆಚ್ಚು ಮಂದಿಯನ್ನು ಕಲ್ಲಕುರಿಚಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ ಈ ದುರಂತಕ್ಕೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ವಿಷಾದ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.