ಕರ್ನಾಲ್ (ಹರಿಯಾಣ) : ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಕರ್ನಾಲ್ ನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ. ಈ ಕುರಿತು ಮಾಹಿತಿ ನೀಡಿರುವ ಪೊಲೀಸರು ಮೃತಪಟ್ಟವರ ಕುಟುಂಬಸ್ಥರಿಗೆ ಮಾಹಿತಿ ತಲುಪಿಸಿದ್ದೇವೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.










