ಚೆನ್ನೈ : ಟಿಕ್ ಟಾಕ್ ವೀಡಿಯೋ ಮಾಡುತ್ತಲೇ ಕಳೆನಾಶಕ ಕುಡಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅನಿತಾ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದ್ದು, ಮೃತ ಅನಿತಾ ಅವರು ಪಳನಿವೇಲ್ ಎಂಬುವವರನ್ನು ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಪತಿ ಸಿಂಗಾಪುರದಲ್ಲಿ ಕೆಲಸ ಮಾಡುತ್ತಿದ್ದು, ಅಕ್ಕಪಕ್ಕದ ಜನರು ಅನಿತಾ ತಮ್ಮ ಮಕ್ಕಳ ಬಗ್ಗೆ ಗಮನ ಹರಿಸದೇ ಯಾವಾಗಲೂ ಟಿಕ್ ಟಾಕ್ ವೀಡಿಯೋ ಮಾಡುವುದರಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದಾರೆ ಎಂದು ಪಳನಿವೇಲ್ ಅವರನ್ನು ಸಂಪರ್ಕಿಸಿ ತಿಳಿಸಿದ್ದಾರೆ. ಇದಕ್ಕೆ ಕೋಪಗೊಂಡ ಪತಿ ಟಿಕ್ ಟಾಕ್ ವೀಡಿಯೋ ಮಾಡುವುದನ್ನು ಬಿಟ್ಟು ಮಕ್ಕಳ ಬಗ್ಗೆ ಗಮನ ಹರಿಸು ಎಂದು ನಿಂದಿಸಿದ್ದಾರೆ. ಪತಿಯ ನಿಂದನೆಯಿಂದ ಮನನೊಂದ ಮಹಿಳೆ ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವ ವೀಡಿಯೋ ಮಾಡಿ ಟಿಕ್ ಟಾಕ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಘಟನೆ ಪೆರಂಬಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.










