ಹುಬ್ಬಳ್ಳಿ : ಪತ್ನಿಯನ್ನು ತನ್ನ ಜೊತೆ ಕಳುಹಿಸಲು ನಿರಾಕರಿಸಿದ್ದಕ್ಕೆ ಅಳಿಯ ಬ್ಲೇಡ್ ನಿಂದ ಮಾವನ ಕತ್ತು ಸೀಳಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ.
ಶಿವಪ್ಪ ದಳವಾಯಿಯ ಮಗಳನ್ನು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದ ಜಗದೀಶ್ ಕಂಬಳಿ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದ. ಆದರೆ ಕಳೆದ ಕೆಲವು ದಿನಗಳಿಂದ ಕೌಟುಂಬಿಕ ಸಮಸ್ಯೆಯಿಂದ ತವರು ಮನೆಗೆ ಬಂದಿದ್ದ ಪತ್ನಿಯನ್ನು ಜಗದೀಶ್ ಕರೆದುಕೊಂಡು ಹೋಗಲು ಗ್ರಾಮಕ್ಕೆ ಬಂದಿದ್ದ. ಆದರೆ ಮಗಳನ್ನು ಕಳುಹಿಸಲು ಶಿವಪ್ಪ ನಿರಾಕರಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಇದರಿಂದ ಸಿಟ್ಟಿಗೆದ್ದ ಜಗದೀಶ್ ಬ್ಲೇಡ್ ನಿಂದ ಹಲ್ಲೆ ಮಾಡಿದ್ದಾನೆ. ತಂದೆಯ ಜೀವ ಉಳಿಸಲು ಬಂದ ಮಗ ಪ್ರವೀಣ ದಳವಾಯಿಯ ಕುತ್ತಿಗೆಗೂ ಬ್ಲೇಡ್ ನಿಂದ ದಾಳಿ ನಡೆಸಿದ್ದಾನೆ.
ಈ ಕುರಿತು ಅಣ್ಣಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










