ಪತ್ನಿಯೊಂದಿಗೆ ಜಗಳ ಮಾಡಿಕೊಂಡು ನೇಣಿಗೆ ಶರಣಾದ ಪತಿ…

132

ಮೈಸೂರು : ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಪತಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮೇಟಗಳ್ಳಿಯ ಬಿ.ಎಂ ಶ್ರೀನಗರದಲ್ಲಿ ನಡೆದಿದೆ. ಶಿವಾನಂದ(50) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಟೆಂಪೋ ಟ್ರಾವೆಲರ್ ಇಟ್ಟಿದ್ದ ಶಿವಾನಂದ್ ಅವರು ಮಹಾಮಾರಿ ಕೊರೊನಾ ಅಟ್ಟಹಾಸದಿಂದ ಸಂಪಾದನೆ ಇಲ್ಲದೆ ಮನೆಯಲ್ಲೇ ಕುಳಿತಿದ್ದರು. ಅಲ್ಲದೇ ಮದ್ಯಪಾನ ಮಾಡಲು ಆರಂಭಿಸಿದ್ದರು. ಈ ವಿಚಾರವಾಗಿ ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು. ಇದರಿಂದ ನೊಂದ ಶಿವಾನಂದ್ ಅವರು ಮನೆಯ ಬಳಿ ಇದ್ದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಮೇಟಗಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.