ರಾಯಚೂರು : ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಆಕೆಯ ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಲಿಂಗಸಗೂರು ತಾಲ್ಲೂಕಿನ ಗುಂತಗೋಳ ಗ್ರಾಮದಲ್ಲಿ ನಡೆದಿದೆ. ಮೌನೇಶ್ ನಾಯಕ ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ 11 ಗಂಟೆಗೆ ಘಟನೆ ನಡೆದಿದೆ.
ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಆಕೆ ಪತಿ ಗುಂಡಪ್ಪ ನಾಯಕ ಮಾರಕಾಸ್ತ್ರಗಳಿಂದ ಕೊಚ್ಚಿ ಮೌನೇಶ್ ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಕೊಲೆ ಆರೋಪಿ ಗುಂಡಪ್ಪನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿದಿದೆ.










