ಪತ್ನಿ ಅಕ್ರಮ ಸಂಬಂಧ ಶಂಕೆ- ಇಬ್ಬರು ಗಂಡು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ…

38
firstsuddi

ಕೋಲಾರ: ವ್ಯಕ್ತಿಯೊಬ್ಬ ತನ್ನ ಇಬ್ಬರು ಗಂಡು ಮಕ್ಕಳಿಗೆ ವಿಷ ಕುಡಿಸಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರು. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.