ಪತ್ನಿ, ಮಕ್ಕಳಿಬ್ಬರಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ…

55
firstsuddi

ಬೆಂಗಳೂರು : ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಕೋಣನಕುಂಟೆಯ ಠಾಣಾ ವ್ಯಾಪ್ತಿಯ ವಡ್ಡರಪಾಳ್ಯ ಮನೆಯೊಂದರಲ್ಲಿ ನಡೆದಿದೆ.

ನಾಗೇಂದ್ರ ಎಂಬುವವರ ಪತ್ನಿ ವಿಜಯಾ(28), ಪುತ್ರಿಯರಾದ ನಿಶಾ(7), ದೀಕ್ಷಾ(5) ಮೃತ ದುರ್ದೈವಿಗಳು. ನಾಗೇಂದ್ರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಊಟದಲ್ಲಿ ವಿಷ ಬೆರೆಸಿ ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ನಾಗೇಂದ್ರ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಬ್ಲೇಡ್ ನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

2014ರಲ್ಲಿ ದಂಪತಿ ಮದುವೆಯಾಗಿದ್ದರು. ನಾಗೇಂದ್ರನಿಗೆ ವಿಪರೀತ ಕುಡಿತದ ಚಟ ಇತ್ತು. ಪತ್ನಿ ವಿಜಯಾ ಮೆಡಿಕಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.