ಪತ್ನಿ ಮತ್ತು ಮಗನನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾದ ಪತಿ…

61
firstsuddi

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಗನನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿರುವಂತಹ ಘಟನೆ ನಿನ್ನೆ ರಾತ್ರಿ ನಗರದ ಬಗಲಗುಂಟೆ ಠಾಣಾ ವ್ಯಾಪ್ತಿಯ ರವೀಂದ್ರನಾಥ ಗುಡ್ಡೆಯಲ್ಲಿ ನಡೆದಿದೆ.

ನವನೀತಾ(33), ಸೃಜನ್(11) ಕೊಲೆಯಾದವರು. ಚಂದ್ರು(38) ಪತ್ನಿಗೆ ಚಾಕುವಿನಿಂದ ಇರಿದು, ಮಗನನ್ನು ಉಸಿರುಗಟ್ಟಿಸಿ ಹತ್ಯೆಗೈದಿರುವ ಆರೋಪಿ.

ಕೊಲೆಯಾದ ಮಹಿಳೆ ಆಂಧ್ರ ಪ್ರದೇಶ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ರವೀಂದ್ರನಾಥ ಗುಡ್ಡೆಯಲ್ಲಿ ವಾಸವಿದ್ದರು. ಆದರೆ ಪತಿಯಿಂದ ಕಳೆದ 2 ವರ್ಷಗಳಿಂದ ದೂರವಾಗಿ ಪ್ರತ್ಯೇಕ ಮನೆಯಲ್ಲಿ ವಾಸಿಸುತ್ತಿದ್ದಳು. ದೂರವಾಗಿದ್ದ ಪತ್ನಿಯ ಮನೆಗೆ ನುಗ್ಗಿರುವ ಆರೋಪಿ ಚಂದ್ರು ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ಪುತ್ರ ಸೃಜನ್‍ನನ್ನು ಉಸಿರುಗಟ್ಟಿಸಿ ಕೊಲೆಗೈದು ಪರಾರಿಯಾಗಿದ್ದಾನೆ.

ಇನ್ನು ಈ ಪ್ರಕರಣ ಭೇದಿಸಲು ಡಿಸಿಪಿ ಶಿವಪ್ರಕಾಶ್ ದೇವರಾಜ ಅವರು ವಿಶೇಷ ತಂಡವನ್ನು ರಚಿಸಿದ್ದಾರೆ. ಈ ಬಗ್ಗೆ ಪೊಲೀಸರು ಚಂದ್ರುನನ್ನು ಹಿಡಿದು ವಿಚಾರಣೆಗೊಳಪಡಿಸಿದಾಗ ಕೊಲೆಯ ಸತ್ಯಾಸತ್ಯತೆ ತಿಳಿಯಲಿದೆ.