ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆ!

66
firstsuddi

ಚಿಕ್ಕೋಡಿ : ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ.

ಸದಾಶಿವ ರಾಮಪ್ಪ ಕಾಂಬಳೆ (26) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಎರಡು ವರ್ಷದ ಹಿಂದೆಯಷ್ಟೇ ಸದಾಶಿವ ರಾಮಪ್ಪ ಕಾಂಬಳೆ, ರೂಪಾ ಅವರನ್ನು ವಿವಾಹವಾಗಿದ್ದರು. ಆದರೆ ಅನಾರೋಗ್ಯ ಹಿನ್ನಲೆ ರೂಪ ಅವರು ಕಳೆದ ಎರಡು ದಿನದ ಹಿಂದೆಯಷ್ಟೇ ನಿಧನರಾಗಿದ್ದರು.

ಇದರಿಂದ ಮನನೊಂದಿದ್ದ ಪತಿ ಸದಾಶಿವ ರಾಮಪ್ಪ ಕಾಂಬಳೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ವಿಜಯಪುರ ಜಿಲ್ಲೆ ಖಾಸಗಿ ಆಸ್ಪತ್ರೆಗೆ ಸದಾಶಿವ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ಆಸ್ಪತ್ರೆಯಲ್ಲಿಯೇ ಸದಾಶಿವ ರಾಮಪ್ಪ ಕಾಂಬಳೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.