ಮುಂಬೈ: ಪತ್ರಾ ಚಾವ್ಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಪತ್ನಿ ವರ್ಷಾ ಅವರಿಗೆ ಇದೀಗ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆ.
ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರನ್ನು ಇಡಿ ಅಧಿಕಾರಿಗಳು ಭಾನುವಾರ ಬಂಧಿಸಿದ್ದು, ಆಗಸ್ಟ್ 8ರವರೆಗೆ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಇಡಿ ಸಂಜಯ್ ರಾವತ್ ಅವರ ಪತ್ನಿಗೆ ಸಮನ್ಸ್ ಜಾರಿಗೊಳಿಸಿದೆ.
ಏಪ್ರಿಲ್ ತಿಂಗಳಲ್ಲಿ ವರ್ಷಾ ರಾವತ್ ಮತ್ತು ಸಂಜಯ್ ರಾವತ್ ಅವರ ಇಬ್ಬರು ಸಹಾಯಕರಿಗೆ ಸೇರಿದ 11.15 ಕೋಟಿ ಮೊತ್ತದ ಹಣವನ್ನು ಇಡಿ ಮುಟ್ಟುಗೋಲು ಹಾಕಿತ್ತು. ಈ ಆಸ್ತಿಯಲ್ಲಿ ದಾದರ್ನಲ್ಲಿರುವ ಫ್ಲಾಟ್ ಮತ್ತು ಅಲಿಬಾಗ್ ನ ಕಿಹಿಮ್ ಬೀಚ್ ನಲ್ಲಿರುವ ಎಂಟು ಪ್ಲಾಟ್ ಗಳು ವರ್ಷಾ ರಾವುತ್ ಅವರಿಗೆ ಸೇರಿದ್ದವು. ಇದೀಗ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ವರ್ಷಾ ರಾವುತ್ ಅವರನ್ನು ಇಡಿ ವಿಚಾರಣೆಗೆ ಕರೆದಿದೆ.










