ಪದವಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಟ್‍ಟಾಪ್ ವಿತರಣೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ…

183
firstsuddi

ಬೆಳಗಾವಿ/ಕಲಬುರಗಿ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‍ಟಾಪ್ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುತ್ತಿದ್ದು, ಆದರೆ ಕಾಲೇಜು ಆಡಳಿತ ಮಂಡಳಿಯಿಂದ ಕೇವಲ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್‍ಟಾಪ್‍ನ್ನು ನೀಡಲಾಗುತ್ತಿದ್ದು, ಹೀಗಾಗಿ ಪದವಿ ಕಾಲೇಜಿನಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‍ಟಾಪ್ ನೀಡಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.