ಪಬ್ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡು ವಿದ್ಯಾರ್ಥಿ ನೇಣಿಗೆ ಶರಣು…

69
firstsuddi

ಕಲಬುರಗಿ: ಪಬ್ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಪ್ರವೀಣ್ ಪಾಟೀಲ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕಲಬುರಗಿ ನಗರದ ದೇವಿ ನಗರ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರವೀಣ್ ನೇಣಿಗೆ ಶರಣಾಗಿದ್ದಾನೆ. ಈತ ಕಲಬುರಗಿ ನಗರದ ಖಾಸಗಿ ಕಾಲೇಜ್‌ನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದು, ಬಿಇ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಆ್ಯಂಡ್ ಮೆಷಿನ್ ಲರ್ನಿಂಗ್ ಕೋರ್ಸ್ ಮಾಡಿದ್ದ.

ಪ್ರವೀಣ್ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಲಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ನಗರದ ದೇವಿ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದನು. ಪ್ರವೀಣ್ ಪಬ್ಜಿ ಗೇಮ್‌ನಿಂದ ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಇದರಿಂದ ಮನನೊಂದ ಪ್ರವೀಣ್ ನಿನ್ನೆ ಸಂಜೆ ನಗರದಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ಸಂಬಂಧ ಆರ್‌ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.