ಪಬ್‍ಜಿ ನಿಷೇಧದಿಂದ ಮನನೊಂದು ಯುವಕ ನೇಣಿಗೆ ಶರಣು…

161
firstsuddi

ಆಂಧ್ರಪ್ರದೇಶ : ಭಾರತದಲ್ಲಿ ಪಬ್‍ಜಿ ನಿಷೇಧವಾಗಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಕಿರಣ್ ಕುಮಾರ್ ಅತ್ಮಹತ್ಯೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ದೇಶದ ಭದ್ರತಾ ದೃಷ್ಠಿಯಿಂದ ಕೇಂದ್ರ ಸರ್ಕಾರ ಇತ್ತೀಚೆಗೆ ಪಬ್‍ಜಿ ಗೇಮ್ ಸೇರಿದಂತೆ ಚೀನಾ ಮೂಲದ 118 ಅಪ್ಲಿಕೇಶನ್‍ಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಇದರಿಂದ ಬೇಸತ್ತ ಯುವಕ ಸೆ. 5ರಿಂದ ನಾಪತ್ತೆಯಾಗಿದ್ದ. ಈ ಕುರಿತು ಯುವಕನ ಪೋಷಕರು ಮಗ ಕಾಣೆಯಾಗಿದ್ದಾನೆ ಎಂದು ಸ್ಥಳೀಯ ಪೊಲೀಸ್ ಠಾಣೆಗೆ ದೂರನ್ನು ಸಲ್ಲಿಸಿದ್ದರು. ದೂರನ್ನು ದಾಖಲಿಸಿಕೊಂಡ ಪೊಲೀಸರು ಯುವಕನಿಗಾಗಿ ಶೋಧಕಾರ್ಯ ನಡೆಸುತ್ತಿದ್ದರು. ಆದರೆ ಇಂದು ಬೆಳಿಗ್ಗೆ ಯುವಕನ ಪೋಷಕರು ಮನೆಯ ಸ್ಟೋರ್ ರೂಮ್ ಬಾಗಿಲು ತೆರೆದು ನೋಡಿದಾಗ ಯುವಕ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.