ಪರಿಷತ್‍ನಲ್ಲಿ ಸತತ 8ನೇ ಬಾರಿಗೆ ಗೆಲುವು ಸಾಧಿಸಿದ ಬಸವರಾಜ್ ಹೊರಟ್ಟಿ.

89
firstsuddi

ಬೆಂಗಳೂರು : ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 7500 ಕ್ಕೂ ಹೆಚ್ಚು ಮತಗಳನ್ನು ಪಡೆದು ಸತತ 8ನೇ ಬಾರಿಗೆ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನ ಬಸವರಾಜ ಗುರಿಕಾರ ಹಾಗೂ ಜೆಡಿಎಸ್ ನ ಶ್ರೀಶೈಲ ಗಿಡದಿನ್ನಿ ಮುಖಭಂಗ ಅನುಭವಿಸಿದ್ದಾರೆ.