ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆ ದಿನ – ಇನ್ನೂ ಅಂತಿಮವಾಗದ ಅಭ್ಯರ್ಥಿಗಳ ಪಟ್ಟಿ…

51
firstsuddi

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದೆ. ಆದರೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಈವರೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆಸಿ ಸಂಜೆ ಹೊತ್ತಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಿ ಸ್ಪರ್ಧಾಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ ಅಂಗಳಕ್ಕೆ ರವಾನಿಸಲಾಗಿದ್ದು, ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.