ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅಧಿಕಾರ ಸ್ವೀಕಾರ…

51
firstsuddi

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಿದ ಹಿನ್ನೆಲೆ ಹಂಗಾಮಿ ಸಭಾಪತಿಯಾಗಿ ಹಿರಿಯ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಇಂದು ಅಧಿಕಾರ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು. ನಿಯಮಾವಳಿಗಳ ಪ್ರಕಾರ ಸಭಾಪತಿ ತಮ್ಮ ರಾಜೀನಾಮೆಯನ್ನು ಉಪಸಭಾಪತಿಗೆ ನೀಡಬೇಕಾಗುತ್ತದೆ. ಮೇಲ್ಮನೆಗೆ ಉಪ ಸಭಾಪತಿ ಸ್ಥಾನ ಖಾಲಿ ಆಗಿರುವುದರಿಂದ ರಾಜೀನಾಮೆ ಅಂಗೀಕಾರ ಆಗಿರಲಿಲ್ಲ. ಬಸವರಾಜ ಹೊರಟ್ಟಿ ಅವರು ತಮ್ಮ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರ ಮಾಡಬೇಕಿರುವುದರಿಂದ ಹಂಗಾಮಿ ಸಭಾಪತಿ ಅವರನ್ನು ನೇಮಕ ಮಾಡಲಾಗಿದೆ.

ಹಂಗಾಮಿ ಸಭಾಪತಿ ಅವರಿಗೆ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದು, ರಘುನಾಥ್ ರಾವ್ ಮಲ್ಕಾಪುರೆ ಅವರು ಅಧಿಕಾರ ವಹಿಸಿಕೊಂಡ ಬಳಿಕ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿದರು.