ಪಲ್ಟಿಯಾದ ಖಾಸಗಿ ಬಸ್ ; ಆಂಧ್ರ ಮೂಲದ ಇಬ್ಬರು ಸಾವು…

50
firstsuddi

ಕೋಲಾರ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಆಂಧ್ರ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ವಿರುಪಾಕ್ಷಿ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ.

ಆಂಧ್ರದ ನಲ್ಲೂರಿನ ವೇಮೂರಿ ಕಾವೇರಿ ಟ್ರಾವೆಲ್ಸ್ ಗೆ ಸೇರಿದ ಬಸ್ ಇದಾಗಿದ್ದು, ಆಂಧ್ರದ ಗುಂಟೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವಾಗ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.