ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಯನದ “ಯುವರತ್ನ” ಚಿತ್ರದ ಟೀಸರ್ ಬಿಡುಗಡೆ…

298

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ “ಯುವರತ್ನ” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಶುಭಾರಂಭವನ್ನು ಕಂಡಿದೆ. ಸಂತೋಷ್ ಆನಂದ್ ರಾಮ್ ಅವರು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರು ಕಾಲೇಜ್ ಯುವಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಟೀಸರಿನಲ್ಲಿ ಪುನೀತ್ ರಾಜ್ ಕುಮಾರ್ ಅವರು ರಗ್ಬಿ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದು, ಯುವರತ್ನ ಚಿತ್ರದ ಮೂಲಕ ನಟಿ ಸಾಯೇಷ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.