ಇಸ್ಲಾಮಾಬಾದ್ : ಪಾಕಿಸ್ತಾನದ ಪೇಶಾವರದಲ್ಲಿ ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡಿದ್ದಾರೆ.
ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ ಮಸೀದಿ ಕಟ್ಟಡದ ಒಂದು ಭಾಗ ಕುಸಿದಿದೆ.
ಭದ್ರತಾ ಅಧಿಕಾರಿಗಳ ಪ್ರಕಾರ, ಆತ್ಮಹತ್ಯಾ ದಾಳಿಕೋರನು ಪ್ರಾರ್ಥನೆಯ ಸಮಯದಲ್ಲಿ ಮುಂದಿನ ಸಾಲಿನಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಪರಿಣಾಮ ಜೋಹ್ರ್ ಪ್ರಾರ್ಥನೆ ಸಲ್ಲಿಸುತ್ತಿದ್ದ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡಿದ್ದಾರೆ.
ಘಟನೆ ವೇಳೆ ಗಾಯಗೊಂಡವರನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಕೆಲವು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸ್ಥಳದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.










