ನವದೆಹಲಿ : ಪಾಕಿಸ್ತಾನದಲ್ಲಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಗಲ್ಲು ಶಿಕ್ಷೆಯನ್ನು ಎದುರಿಸುತ್ತಿದ್ದ ಭಾರತದ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಯನ್ನು ಅಂತರಾಷ್ಟ್ರೀಯ ನ್ಯಾಯಾಲಯ ರದ್ದುಗೊಳಿಸಿದೆ. ನ್ಯಾಯಾಲಯದ ಈ ತೀರ್ಪಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಇತರೆ ರಾಜಕೀಯ ಗಣ್ಯರು ನ್ಯಾಯಾಲಯದ ತೀರ್ಪನ್ನು ತಮ್ಮ ಟ್ವಿಟರ್ ಮೂಲಕ ಸ್ವಾಗತಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದಿನ ತೀರ್ಪನ್ನು ಸಿಐಜೆ, ಐಸಿಜೆ ನಲ್ಲಿ ನಾವು ಸ್ವಾಗತಿಸುತ್ತೇವೆ. ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸಿದೆ. ಸತ್ಯಗಳ ವ್ಯಾಪಕ ಅಧ್ಯಯನದ ಆಧಾರದ ಮೇಲೆ ತೀರ್ಪು ನೀಡಿದ ಐಸಿಜೆಗೆ ಅಭಿನಂದನೆಗಳು. ಕುಲಭೂಷಣ್ ಜಾಧವ್ ಅವರಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸ ನನಗೆ ಇದೆ. ಪ್ರತಿಯೊಬ್ಬ ಭಾರತೀಯರ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಯಾವಾಗಲೂ ಕೆಲಸ ಮಾಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.