ಪಾಕಿಸ್ತಾನ : ಎರಡು ರೈಲುಗಳ ನಡುವೆ ಡಿಕ್ಕಿ ; 30 ಮಂದಿ ಸಾವು…

91
firstsuddi

ಇಸ್ಲಾಮಾಬಾದ್ : ಎರಡು ರೈಲುಗಳು ಡಿಕ್ಕಿಯಾದ ಪರಿಣಾಮ 30 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯ ಧಾರ್ಕಿ ನಗರದ ಬಳಿ ನಡೆದಿದೆ.

ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ 50 ಮಂದಿಗೆ ಗಾಯಗಳಾಗಿವೆ. ಲಾಹೋರ್ ನಿಂದ ಕರಾಚಿಗೆ ಹೋಗುತ್ತಿದ್ದ ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಸರ್ಗೋಧಾದಿಂ ಹೊರಟಿದ್ದ ಮಿಲ್ಲಾಟ್ ಎಕ್ಸ್ ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮಿಲ್ಲಾಟ್ ಎಕ್ಸ್ ಪ್ರೆಸ್ ರೈಲಿನ 13 ಬೋಗಿಗಳು ಹಳಿ ತಪ್ಪಿದ್ದು, 8 ಬೋಗಿಗಳು ನಜುಗುಜ್ಜಾಗಿವೆ.

ಈಗಾಗಲೇ 30 ಪ್ರಯಾಣಿಕರು ಮೃತಪಟ್ಟಿದ್ದು, ಬೋಗಿಗಳ ಅಡಿಯಲ್ಲಿ ಹಲವಾರು ಜನರು ಸಿಲುಕಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಘೋಟ್ಕಿ ಜಿಲ್ಲಾಧಿಕಾರಿ ಉಸ್ಮಾನ್ ಅಬ್ದುಲ್ಲಾ ತಿಳಿಸಿದ್ದಾರೆ.