ಪಾಕಿಸ್ತಾನ ಕ್ರಿಕೆಟ್ ತಂಡ ಹಾಗೂ ಕ್ರಿಕೆಟ್ ಮಂಡಳಿಯನ್ನು ಬ್ಯಾನ್ ಮಾಡುವಂತೆ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ ಅಭಿಮಾನಿ…

326
firstsuddi

ಇಸ್ಲಾಮಾಬಾದ್ : ಭಾರತ ತಂಡದ ವಿರುದ್ಧ ಪಾಕಿಸ್ತಾನ ಹೀನಾಯವಾಗಿ ಸೋಲು ಕಂಡಿದ್ದು, ಪಾಕಿಸ್ತಾನದ ಅಭಿಮಾನಿಯೊಬ್ಬರು ಪಾಕಿಸ್ತಾನ ಕ್ರಿಕೆಟ್ ತಂಡ ಹಾಗೂ ಪಾಕಿಸ್ತಾನ ಕ್ರಿಕೆಟ್ ಆಯ್ಕೆ ಸಮಿತಿಯನ್ನು ಬ್ಯಾನ್ ಮಾಡುವಂತೆ ಕೋರ್ಟ್‍ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತಂತೆ ಕೋರ್ಟ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದು, ಭಾರತ ಕ್ರಿಕೆಟ್ ತಂಡದ ವಿರುದ್ಧ ಪಾಕಿಸ್ತಾನ ತಂಡ ಸೋಲು ಅನುಭವಿಸದ್ದರಿಂದ ಪಾಕಿಸ್ತಾನ ಅಭಿಮಾನಿಗಳು ಆಟಗಾರರನ್ನು ವಿಲನ್ ಗಳಂತೆ ಕಾಣುತ್ತಿದ್ದು, ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ತಂಡದ ಕಳಪೆ ಪ್ರದರ್ಶನದಿಂದಾಗಿ ದೇಶದ ಮಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಆದ್ದರಿಂದ ಇದಕ್ಕೆ ಕಾರಣರಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಬ್ಯಾನ್ ಮಾಡುವಂತೆ ಅರ್ಜಿದಾರರು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.