ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳು.

67
firstsuddi

ಬೆಗಳೂರು : ನಗರದ ಖಾಸಗಿ ಕಾಲೇಜೊಂದರಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ.

ನಿನ್ನೆ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆಂಧ್ರ ಪ್ರದೇಶ ಮೂಲದ ಆರ್ಯನ್, ಮಹಾರಾಷ್ಟ್ರ ಮೂಲದ ರಿಯಾ ರವಿಚಂದ್ರನ್ ಮತ್ತು ಪಂಜಾಬ್ ನ ದಿನಕರ್ ಪಾಕಿಸ್ತಾನ ಎಂದು ಪಾಕ್ ಪರ ಘೋಷಣೆ ಕೂಗಿದ್ದರು. ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ ಮೂವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿ, ಮಾರತಹಳ್ಳಿ ಠಾಣೆಗೆ ದೂರು ನೀಡಿತ್ತು.

ಕೂಡಲೇ ಮೂವರನ್ನು ವಶಕ್ಕೆ ಪಡೆದಿದ್ದ ಮಾರತಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 153, 505(1) ಅಡಿಯಲ್ಲಿ ಎಫ್ ಐಆರ್ ದಾಖಲಿಸಿದ್ದರು ಮತ್ತು ತಡರಾತ್ರಿವರೆಗೂ ವಿಚಾರಣೆ ಕೈಗೊಂಡಿದ್ದರು. ತನಿಖೆ ವೇಳೆ ತಮಾಷೆಗಾಗಿ ಪಾಕ್ ಪರ ಘೋಷಣೆ ಕೂಗಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದರು.

ಸದ್ಯ ವಿದ್ಯಾರ್ಥಿಗಳ ಮೊಬೈಲ್ ವಶಕ್ಕೆ ಪಡೆದು ಕಳಿಸಿದ್ದ ಮಾರತ್ತಹಳ್ಳಿ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.