ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾಜಿ ಪತ್ನಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡಿನ ದಾಳಿ…

80
firstsuddi

ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಮಾಜಿ ಪತ್ನಿ ರೇಹಮ್ ಖಾನ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಈ ಸಂಬಂಧ ಕೋಪಗೊಂಡ ರೇಹಮ್, ಇಮ್ರಾನ್ ಖಾನ್ ವಿರುದ್ಧ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ನಾನು ನನ್ನ ಸಂಬಂಧಿಯೊಬ್ಬರ ವಿವಾಹ ಸಮಾರಂಭದಿಂದ ಭಾನುವಾರ ರಾತ್ರಿ ವಾಪಸ್ ಬರುತ್ತಿದ್ದೆ. ಆಗ ನನ್ನ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೋಟರ್ ಸೈಕಲ್ ಮೇಲೆ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ. ನನ್ನ ಆಪ್ತ ಕಾರ್ಯದರ್ಶಿ ಮತ್ತು ಚಾಲಕ ಕೂಡ ಕಾರಿನಲ್ಲಿ ಇದ್ದರು. ಅದೃಷ್ಟಕ್ಕೆ ಏನೂ ಅಪಾಯ ಆಗಲಿಲ್ಲ. ಈ ಇಮ್ರಾನ್ ಖಾನ್ ಆಡಳಿತದ ಹೊಸ ಪಾಕಿಸ್ತಾನ, ಈಗ ಹೇಡಿಗಳು, ಕೊಲೆಗಡುಕರು, ದುರಾಸೆಬುರುಕರ ರಾಜ್ಯವಾಗಿದೆ ಎಂದು ಟ್ವಿಟ್ಟರ್ ಮೂಲಕ ಟೀಕಿಸಿದ್ದಾರೆ.

ಟಿವಿ ನಿರೂಪಕಿ ರೇಹಮ್ 2014ರ ಅಕ್ಟೋಬರ್ 30ರಂದು ಇಮ್ರಾನ್ ಖಾನ್ರನ್ನು ಮದುವೆಯಾಗಿದ್ದರು. ನಂತರ 2015ರಲ್ಲಿ ವಿಚ್ಛೇದನ ನೀಡಿದ್ದಾರೆ.