ಪಾಠ ನೆಪದಲ್ಲಿ ಮಕ್ಕಳ ಅಂಗಾಂಗ ಮುಟ್ಟಿ ವಿಕೃತಿ, ಮಹಿಳೆಯರೊಂದಿಗೆ ರಾಸಲೀಲೆ ; ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್.

82
firstsuddi

ಕೊಪ್ಪಳ : ಶಿಕ್ಷಕನೋರ್ವ ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ, ಮಹಿಳೆಯರೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. 

ಮಹಮ್ಮದ್ ಅಜರುದ್ಧೀನ್ ಸಿಂಧನೂರು ತಾಲೂಕಿನ ಸಿಂಗಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕನಾಗಿ ಕೆಲಸ ಮಾಡಿಕೊಂಡು, ಕೊಪ್ಪಳ ಜಿಲ್ಲೆಯ ಕಾರಟಗಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು. ಆಟ – ಪಾಠದ ನೆಪದಲ್ಲಿ ತನ್ನ ಕಾರಟಗಿ ಮನೆಗೆ ಮಕ್ಕಳನ್ನು ಕರೆಯಿಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಮಕ್ಕಳ ಅಂಗಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಅಲ್ಲದೇ ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿ ಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನು ಮಹಮ್ಮದ್ ಅಜರುದ್ಧೀನ್ ಇಬ್ಬರು ಮಹಿಳೆಯರ ಜೊತೆಯಲ್ಲಿರುವ ಖಾಸಗಿ ವಿಡಿಯೋಗಳು ವೈರಲ್ ಆಗಿದ್ದವು. ಇದರ ಜೊತೆಗೆ ಮಕ್ಕಳ ಅಂಗಾಂಗಳನ್ನು ಮುಟ್ಟಿ ವಿಕೃತಿ ಮೆರೆದ ವಿಡಿಯೋ ಕೂಡ ವೈರಲ್ ಆಗಿತ್ತು. ಈ ವಿಡಿಯೋಗಳು ವೈ ರಲ್ ಆಗ್ತಿದ್ದಂತೆ ಅಜರುದ್ಧೀನ್ ನಾಪತ್ತೆಯಾಗಿದ್ದಾನೆ. ಸದ್ಯ ಸಾರ್ವಜನಿಕರು ಶಿಕ್ಷಕನೊಂದಿಗೆ ಕಾದಾಟ ನಡೆಸಿರುವ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಶಿಕ್ಷಕ ಅಜರುದ್ಧೀನ್ ನನ್ನು ಅಮಾನತುಗೊಳಿಸುವಂತೆ ಸಿಂಧನೂರು ಬಿಇಒ ಶರಣಪ್ಪ ವಟಗಲ್ ಆದೇಶಿಸಿದ್ದಾರೆ.

ಅಶ್ಲೀಲ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಂತ್ರಸ್ತೆ ಶಿಕ್ಷಕನ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತೇನೆ ಎಂದು ಪರಿಚಯ ಮಾಡಿಕೊಂಡಿದ್ದ ಅಜರುದ್ದೀನ್ ಲೈಂಗಿಕವಾಗಿ ಬಳಸಿ ಕೊಂಡಿದ್ದಾನೆ. ನಂತರ ನೀನು ಸಹಕರಿಸದಿದ್ದರೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ನನ್ನ ಜೊತೆ ಲೈಂಗಿಕ ಸಂಪರ್ಕ ಮಾಡದೇ ಹೋದರೆ ನಿನ್ನನ್ನು ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಶಿಕ್ಷಕ ಅಜರುದ್ದೀನ್ ವಿರುದ್ಧ ಐಪಿಸಿ ಸೆಕ್ಷನ್ 376, 354, 323, 504, 506ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.