ಆನೇಕಲ್: ನಗರದ ಹೊಸ ರೋಡ್ ಬಳಿಯ ಪಿಇಎಸ್ ಕಾಲೇಜ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಪ್ರಥಮ ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ನಡೆದಿದೆ.
ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಹಾರಿ ವಿಘ್ನೇಶ್.ಕೆ(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಘ್ನೇಶ್, ರಾಘವೇಂದ್ರ ನಗರದ ನಿವಾಸಿ ಕರುಪ್ಪಸ್ವಾಮಿ ದಂಪತಿ ಪುತ್ರ. ಕಾಲೇಜಿನಲ್ಲಿ ಸಂಜೆ 4 ಗಂಟೆ ಸುಮಾರಿಗೆ 6ನೇ ಮಹಡಿಗೆ ತೆರಳಿ ವಿಘ್ನೇಶ್ ಜಿಗಿದಿದ್ದಾನೆ. ಕೆಳಗೆ ಬಿದ್ದ ಕೂಡಲೇ ತೀವ್ರ ರಕ್ತಸ್ರಾವವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.










