ಬಳ್ಳಾರಿ : ಪಿಎಚ್ ಡಿ ಮಾಡುವುದು ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ನಡೆದಿದ್ದು, ಪೂಜಾ(24) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಪೂಜಾ ಎಂ.ಎಸ್ಸಿ ಮುಗಿಸಿಕೊಂಡು ಬಿ.ಎಡ್ ವ್ಯಾಸಂಗ ಮಾಡುತ್ತಿದ್ದರು. ಈಗ ಪಿಎಚ್ ಡಿ ಮಾಡುವುದಾಗಿ ತಂದೆಯೊಂದಿಗೆ ತನ್ನ ಅಭಿಪ್ರಾಯ ತಿಳಿಸಿದ್ದಾರೆ. ಆದರೆ ತಂದೆ ನಾಗರಾಜ್, ಪಿಎಚ್ ಡಿ ಮಾಡುವುದು ಬೇಡ ಎಂದಿದ್ದಾರೆ. ಇದರಿಂದ ಮನನೊಂದ ಪೂಜಾ ರೂಂ ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಎಷ್ಟೋತ್ತಾದರೂ ರೂಂ ನಿಂದ ಪೂಜಾ ಹೊರಗಡೆ ಬರದೆ ಇದ್ದದನ್ನು ಗಮನಿಸಿ, ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










