ಬೆಂಗಳೂರು : ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕ ಕಾಂಗ್ರೆಸ್ ಸ್ವಾಗತಿಸಿದೆ.
ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ.
ಪಿಎಫ್ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದೆ.










