ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಆರೋಪಿ ದರ್ಶನ್ ಗೌಡನನ್ನು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ಮೂಲದ ದರ್ಶನ್ ಗೌಡ ನನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಐಡಿ ಪೊಲೀಸರು ಇಂದು ಬಂಧಿಸಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಜೊತೆಗೆ ಕೋರಮಂಗಲದಲ್ಲಿ ನೆಲಮಂಗಲ ಕಾನ್ಸ್ ಸ್ಟೇಬಲ್ ಮೋಹನ್ ಕುಮಾರ್ ಹಾಗೂ ರಾಮಮೂರ್ತಿನಗರ ಪೊಲೀಸರು ಹರೀಶ್ ನನ್ನು ಬಂಧಿಸಿದ್ದಾರೆ. ಪ್ರತ್ಯೇಕವಾಗಿ ಮೂರು ಕೇಸ್ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪರೀಕ್ಷೆಯಲ್ಲಿ 9ನೇ ರ‍್ಯಾಂಕ್ ಪಡೆದಿದ್ದ ದರ್ಶನ್ ಗೌಡನನ್ನು ಈ ಹಿಂದೆ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ಸಚಿವ ಡಾ. ಅಶ್ವತ್ಥ ನಾರಾಯಣ್ ಹಾಗೂ ಅವರ ಸಹೋದರ ಸತೀಶ್ ಹೆಸರು ಹೇಳಿದ್ದ. ಬಳಿಕ ಆತನನ್ನು ಸಿಐಡಿ ಅಧಿಕಾರಿಗಳು ಬಿಟ್ಟು ಕಳುಸಿದ್ದರು. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.










