ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಏಪ್ರಿಲ್ 29ಕ್ಕೆ ಮುಂದೂಡಿದೆ.
ದಿವ್ಯಾ ಹಾಗರಗಿ, ಕಾಶಿನಾಥ್, ಮಂಜುನಾಥ ಮೇಳಕುಂದಿ, ಅರ್ಚನಾ ಹೊನಗೇರಿ, ಸುನಂದಾ ಅವರ ಜಾಮೀನಿಗೆ ಸಿಐಡಿ ತಕರಾರು ಅರ್ಜಿ ಸಲ್ಲಿಸಲಾಗಿದೆ. ಇದು ಸಂಘಟಿತ ಅಪರಾಧ. ಜಾಮೀನು ಕೊಟ್ಟರೆ ಸಾಕ್ಷಿ ನಾಶಪಡಿಸುವ ಸಾಧ್ಯತೆ ಇದೆ. ಹೀಗಾಗಿ, ಈ ಐವರಿಗೆ ನಿರೀಕ್ಷಣಾ ಜಾಮೀನು ನೀಡಬೇಡಿ ಎಂದು ಕಲಬುರಗಿಯ ಜಿಲ್ಲಾ ನ್ಯಾಯಾಲಯಕ್ಕೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿತ್ತು.










