ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಮೂಲದ ಎನ್.ವಿ.ಸುನೀಲ್ ಕುಮಾರ್ ಬಂಧಿತ. ಈತ ಜ್ಞಾನ ಜ್ಯೋತಿ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಮೂಲಕ ಪರೀಕ್ಷೆ ಬರೆದಿದ್ದಾನೆ. ಈತ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಅಭ್ಯರ್ಥಿ ಆಗಿದ್ದಾನೆ. ನಿನ್ನೆ ಓ.ಎಂ.ಆರ್ ಶೀಟ್ ಪರಿಶೀಲನೆಗೆ ಬೆಂಗಳೂರು ಸಿಐಡಿ ಕಚೇರಿಗೆ ಹೋದಾಗ ಎನ್.ವಿ.ಸುನೀಲ್ ಕುಮಾರ್ ನನ್ನು ಬಂಧಿಸಲಾಗಿದೆ. ಸದ್ಯ ಸುನೀಲ್ ನನ್ನು ಬೆಂಗಳೂರಿನಿಂದ ಕಲಬುರಗಿಗೆ ಕರೆತಂದಿರುವ ತನಿಖಾಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.










