ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಪಿಎಸ್ ಐ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಪಿಎಸ್ಐ ಅಕ್ರಮ ಪ್ರಕರಣ ತನಿಖೆಯನ್ನು ಸಿಐಡಿ ಪೊಲೀಸರು ನಡೆಸುತ್ತಿದ್ದಾರೆ. ಚಾರ್ಚ್ ಶೀಟ್ ಆಗುವವರೆಗೂ ಏನೂ ಹೇಳುವುದಕ್ಕೆ ಆಗುವುದಿಲ್ಲ. ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ರೀ ಎಕ್ಸಾಂ ಮಾಡುತ್ತೇವೆ. ತಪ್ಪಿತಸ್ಥ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ ಸಿಗಕೂಡದು. ಈ ಸಲುವಾಗಿ ಪರೀಕ್ಷೆ ದಿನಾಂಕ ಪ್ರಕಟಿಸಿಲ್ಲ. ಇನ್ನೆರಡು ತಿಂಗಳಲ್ಲಿ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಡೇಟ್ ಅನೌನ್ಸ್ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಪಿಎಸ್ಐ ಹಗರಣ ಸಂಬಂಧ ಈಗಾಗಲೇ ಹಿರಿಯ ಐಪಿಎಸ್ ಅಧಿಕಾರಿ, ಅಭ್ಯರ್ಥಿಗಳು ಸೇರಿ ಹಲವರನ್ನು ಸಿಐಡಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.










