ಬೆಂಗಳೂರು : ಪಿಎಸ್ಐ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದ್ದು, ಪಿಎಸ್ಐ ಮರು ಪರೀಕ್ಷೆಗೆ ತಡೆ ನೀಡಿದೆ.
ಮರು ಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ಮನವಿ ಆಲಿಸಿದ ನ್ಯಾ. ಜಿ.ನರೇಂದರ್ ಅವರಿದ್ದ ವಿಭಾಗೀಯ ಪೀಠ, ಮುಂದಿನ ಆದೇಶದವರೆಗೆ ಮರು ಪರೀಕ್ಷೆ ದಿನಾಂಕವನ್ನು ಪ್ರಕಟಿಸಬಾರದು ಎಂದು ಮಧ್ಯಂತರ ಆದೇಶವನ್ನು ಹೊರಡಿಸಿದೆ.
ಸರ್ಕಾರ ಏ.29ರಂದು ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪಿಎಸ್ಐ ಪರೀಕ್ಷಾ ನೇಮಕಾತಿ ಹಗರಣ ಸಂಬಂಧ ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಸಿಐಡಿ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಪಿಎಸ್ಐ ಪರೀಕ್ಷಾ ನೇಮಕಾತಿ ಜಾಲದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ ನ್ಯಾಯಾಲಯಕ್ಕೆ ಅಮೃತ್ ಪಾಲ್ ವಿರುದ್ಧ 1,406 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.










