ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ; 11 ಪೊಲೀಸ್ ಸಿಬ್ಬಂದಿ ಅಮಾನತು…

62
firstsuddi

ಕಲಬುರಗಿ : ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಕರ್ತವ್ಯಲೋಪ ಆರೋಪದಡಿ ಇಬ್ಬರು ಎಎಸ್ ಐ ಹಾಗೂ 9 ಜನ ಕಾನ್ ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದ್ದು, ಈ ಮೂಲಕ ಈವರೆಗೆ ಅಮಾನತುಗೊಂಡವರ ಸಂಖ್ಯೆ 13ಕ್ಕೆ ಏರಿದೆ.

ಅಮಾನತುಗೊಂಡಿರುವ ಈ 11 ಮಂದಿ ಸಿಬ್ಬಂದಿ ಎಂ.ಎಸ್. ಇರಾನಿ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭದ್ರತಾ ಕೆಲಸಕ್ಕಾಗಿ ನಿಯೋಜನೆಗೊಂಡಿದ್ದರು.