ಮಂಡ್ಯ : 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಈ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನನ್ನು ಮಂಡ್ಯದಲ್ಲಿ ಸಿಐಡಿ ವಶಕ್ಕೆ ಪಡೆದುಕೊಂಡಿದೆ.
ಶರತ್ ರಾಮಣ್ಣ ಮಂಡ್ಯದ ನಾಗಮಂಗಲ ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಹಾಗೂ ಮಾಜಿ ಸಚಿವ ಚೆಲುವರಾಯಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಶ್ರವಣಬೆಳಗೊಳ ಪಿಎಸ್ಐ ಪರವಾಗಿ ಅಕ್ರಮವೆಸಗಿರುವ ಆರೋಪ ಶರತ್ ರಾಮಣ್ಣ ಅವರ ಮೇಲೆ ಇದೆ. ಅಲ್ಲದೇ ಇವರು ಪಿಎಸ್ಐ ಕೆಲಸದ ವಿಚಾರದಲ್ಲಿ ಮಧ್ಯವರ್ತಿಯಾಗಿದ್ದರು ಎಂಬ ಆರೋಪ ಸಹ ಇದೆ. ಈ ಆರೋಪಗಳ ಮೇಲೆ ಶರತ್ ರಾಮಯ್ಯ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.










