ಪಿಡಬ್ಲೂಡಿ ಜೆ.ಇ. ಶಾಂತಗೌಡ ಬಿರಾದರ್ ಗೆ 14 ದಿನ ನ್ಯಾಯಾಂಗ ಬಂಧನ…

69
firstsuddi

ಕಲಬುರಗಿ : ಅಕ್ರಮ ಆಸ್ತಿ ಸಂಪಾದನೆ ಆರೋಪ ಪ್ರಕರಣದಲ್ಲಿ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಜೇವರ್ಗಿ ಪಿಡಬ್ಲ್ಯೂಡಿ ಜೆ.ಇ. ಶಾಂತಗೌಡ ಬಿರಾದರ್ ಅವರನ್ನು ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಿನ್ನೆ ಎಸಿಬಿ ಅಧಿಕಾರಿಗಳು ಶಾಂತಗೌಡ ಬಿರಾದರ್ ಅವರ ಗುಬ್ಬಿ ಕಾಲೋನಿಯ ಮನೆ, ತೋಟದ ಮನೆ, ಜೇವರ್ಗಿಯಲ್ಲಿನ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದ್ದರು. ಈ ವೇಳೆ, ಡ್ರೈನೇಜ್ ಪೈಪ್ ನಲ್ಲೂ ಬಚ್ಚಿಟ್ಟಿದ್ದ ಹಣದ ಕಂತೆ ಸೇರಿ ಸುಮಾರು 54 ಲಕ್ಷ ರೂ. ನಗದು ಒಳಗೊಂಡಂತೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿತ್ತು.

ಇನ್ನೂ ನಿನ್ನೆ ಎಸಿಬಿ ಅಧಿಕಾರಿಗಳು ಮನೆಗೆ ಬಂದಾಗ ಬಾಗಿಲು ತೆಗೆಯದೇ ಶಾಂತಗೌಡ ಸತಾಯಿಸಿದ್ದ. ಮತ್ತೊಂದೆಡೆ ದಾಳಿ ವೇಳೆ ತನಿಖೆಗೆ ಸಹಕರಿಸಿರಲಿಲ್ಲ. ಇದೇ ಕಾರಣಕ್ಕೆ ನಿನ್ನೆ ರಾತ್ರಿ ಶಾಂತಗೌಡ ಅವರನ್ನು ಬಂಧಿಸಿದ ಎಸಿಬಿ ಅಧಿಕಾರಿಗಳು ಸ್ಥಳೀಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಇದೀಗ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ.