ಚಾಮರಾಜನಗರ : ಇಂದು ಪ್ರಕಟಗೊಂಡ ಪಿಯುಸಿ ಫಲಿತಾಂಶದಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹಾಸ್ಟೆಲ್ ವೊಂದರಲ್ಲಿ ನಡೆದಿದೆ.
ಗುಂಡ್ಲುಪೇಟೆ ಮೂಲದ ವಿಜಯಲಕ್ಷ್ಮಿ (18) ಮೃತ ವಿದ್ಯಾರ್ಥಿನಿ. ಜೆಎಸ್ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ವಿಜಯಲಕ್ಷ್ಮಿ ವಿಜ್ಞಾನ ವಿಭಾಗದಲ್ಲಿ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಳು. ಇದರಿಂದ ಮನನೊಂದು ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಚಾಮರಾಜನಗರ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










