ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ಚಕ್ರತೀರ್ಥ ಅವರನ್ನು ಕೈಬಿಟ್ಟ ಶಿಕ್ಷಣ ಇಲಾಖೆ.

69
firstsuddi

ಬೆಂಗಳೂರು : ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ ಮಾಡಿದ್ದ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಅಧ್ಯಾಯ 4.2ರ `ಹೊಸ ಧರ್ಮಗಳ ಉದಯ’ ಪಠ್ಯ ಮಾತ್ರ ಪರಿಷ್ಕರಣೆಗೆ ವಹಿಸಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ಪಿಯುಸಿ ಪಠ್ಯ ಪರಿಷ್ಕರಣೆ ಕೈ ಬಿಡಲು ತೀರ್ಮಾನಿಸಿ, ರೋಹಿತ್ ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಕುರಿತು ವಿಧಾನಸೌಧಲ್ಲಿ ಇಂದು ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ರೋಹಿತ್ ಚಕ್ರತೀರ್ಥ ಅವರ ಸಮಿತಿಯನ್ನೇ ಪಿಯು ಪಠ್ಯಪರಿಷ್ಕರಣೆಗೆ ನೇಮಿಸಿದ್ವಿ. ಆದರೆ ರೋಹಿತ್ ಸಮಿತಿಯನ್ನು ಈಗಾಗಲೇ ವಿಸರ್ಜಿಸಲಾಗಿದೆ. ಹಾಗಾಗಿ ಪಿಯು ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಲಾಗಿದ್ದು, ಅದರ ವರದಿ ಪಡೆಯುತ್ತಿಲ್ಲ. ದ್ವಿತೀಯ ಪಿಯುಸಿಯ ಒಂದು ಪಠ್ಯವನ್ನೂ ಸಹ ಪರಿಷ್ಕರಣೆ ಮಾಡುವುದಿಲ್ಲ. ಈಗ ಇರುವ ಪಠ್ಯವನ್ನು ಯಥಾವತ್ತಾಗಿ ಉಳಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಬಸವಣ್ಣ ಪಠ್ಯ ವಿಚಾರವಾಗಿ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವರು, ಬರಗೂರು ರಾಮಚಂದ್ರಪ್ಪ ನೀಡಿದ ಪಠ್ಯವನ್ನೇ ಮುಂದುವರೆಸಲಿದ್ದೇವೆ. ಅದರ ಬಗ್ಗೆ ಯಾರಿಗೂ ಆಕ್ಷೇಪ ಇಲ್ಲ. ಹಾಗಾಗಿ ಬರಗೂರು ಪಠ್ಯಪುಸ್ತಕ ಸಮಿತಿ ನೀಡಿದ ಬಸವಣ್ಣ ಪಠ್ಯ ಮುಂದುವರೆಯಲಿದೆ. ಅಂಬೇಡ್ಕರ್ ಪಠ್ಯ ಸೇರಿದಂತೆ ಇತರೆ ಪಠ್ಯಗಳಲ್ಲಿರೋ ಲೋಪಗಳನ್ನೂ ಸರಿಪಡಿಸುತ್ತೇವೆ ಎಂದು ಹೇಳಿದರು.