ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಕಂಟೈನರ್ ಪಲ್ಟಿ- ಇಬ್ಬರು ದುರ್ಮರಣ…

118
firstsuddi

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಗ್ಗೆ ಕಂಟೈನರ್ ಪಲ್ಟಿಯಾಗಿ, ಡಿವೈಡರ್‌ಗೆ ಜಿಗಿದು ಐದು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಖೋಪೋಲಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪುಣೆಯಿಂದ ಮುಂಬೈಗೆ ತೆರಳುತ್ತಿದ್ದ ಕಂಟೈನರ್, ಅತಿವೇಗದ ಕಾರಣ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ವಾಹನ ಪಲ್ಟಿ ಹೊಡೆದು ಇನ್ನೊಂದು ಮಾರ್ಗದಲ್ಲಿ ಎದುರಿನಿಂದ ಬರುತ್ತಿದ್ದ ಐದು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಕಂಟೈನರ್ ಅಡಿಯಲ್ಲಿ ಐದು ಕಾರುಗಳು ಬಿದ್ದಿವೆ. ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.