ಪುತ್ತೂರು : ಬೈಕ್ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿ-ಬೈಕ್ ಸವಾರ ಸಾವು…

128
firstsuddi

ಪುತ್ತೂರು : ಬೈಕ್ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪುತ್ತೂರು ನಗರದ ಬೈಪಾಸ್ ತೆಂಕಿಲ ಎಂಬಲ್ಲಿ ನಡೆದಿದೆ. ಮೊಹಮ್ಮದ್ ಹಾಶಿಂ(20) ಮೃತ ಯುವಕ ಎಂದು ಗುರುತಿಸಲಾಗಿದ್ದು, ಮೃತ ಯುವಕ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಬೈಕ್ ನಿಂದ ಹಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಮಂಗಳುರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದು, ಈ ಕುರಿತು ಪತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.