ಪುತ್ತೂರು: ಮಾಜಿ ಪ್ರಿಯಕರನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು…

245
firstsuddi

ಮಂಗಳೂರು: ಮಾಜಿ ಪ್ರಿಯಕರನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಮೃತ ಯುವತಿಯನ್ನು ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಬಾಲಕೃಷ್ಣ ಗೌಡ ಅವರ ಪುತ್ರಿ ಮಧುಶ್ರೀ(26) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸಮಾಡಿಕೊಂಡಿದ್ದ ಯುವತಿ ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು, ವಿವಾಹಿತನಾಗಿರುವ ಮಾಜಿ ಪ್ರಿಯಕರ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.