ಪುನೀತ್‍ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ – ಸಿಎಂ ಬೊಮ್ಮಾಯಿ ಘೋಷಣೆ…

66
firstsuddi

ಬೆಂಗಳೂರು : ನಟ ಪುನೀತ್‍ರಾಜ್ ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ಪುನೀತ್ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್‍ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತವೆ. ಅಪ್ಪು ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುತ್ತೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸ್ಮಾರಕ ನಿರ್ಮಾಣ ಮಾಡುವುದಾಗಿ ಸಿಎಂ ಹೇಳಿದರು.

ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.