ಪುನೀತ್ ಆತ್ಮದ ಜೊತೆ ಮಾತನಾಡಿದ್ದಾಗಿ ವೀಡಿಯೋ ಅಪ್ಲೋಡ್ ಮಾಡಿದ ಚಾರ್ಲಿ – ತರಾಟೆಗೆ ತೆಗೆದುಕೊಂಡ ಅಭಿಮಾನಿಗಳು …

90
firstsuddi

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ಅಭಿಮಾನಿಗಳು ಇನ್ನೂ ಹೊರಬಂದಿಲ್ಲ. ಈ ಮಧ್ಯೆ ವಿದೇಶಿಗನೊಬ್ಬ ಪುನೀತ್ ಆತ್ಮದ ಜೊತೆ ಮಾತನಾಡಿದ್ದಾಗಿ ತನ್ನ ಯೂಟ್ಯೂಬ್ ನಲ್ಲಿ ವೀಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾನೆ.

ಹೌದು, ಚಾರ್ಲಿ ಚಿಟ್ವೆಂಡೆನ್ ಪ್ಯಾರಾನಾರ್ಮಲ್ ಎಂಬಾತ ವೀಡಿಯೋವೊಂದನ್ನು ಅಪ್ಲೋಡ್ ಮಾಡಿಕೊಂಡಿದ್ದು, ಈ ವೀಡಿಯೋದಲ್ಲಿ ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದಕ್ಕೆ ಅಪ್ಪು ಉತ್ತರ ನೀಡಿದ್ದಾರೆ ಎಂದು ತಿಳಿಸಿದ್ದಾನೆ. ಅಲ್ಲದೆ ತಮ್ಮ ಹೆಣ್ಣು ಮಕ್ಕಳ ಬಗ್ಗೆ ಕೇಳಿದಾಗ ಐ ಲವ್ ದೆಮ್ ಎಂದು ಆತ್ಮ ಹೇಳಿರುವುದಾಗಿ ಚಾರ್ಲಿ ವೀಡಿಯೋದಲ್ಲಿ ಬರೆದುಕೊಂಡಿದ್ದಾನೆ. ಈ ವೀಡಿಯೋ ಅಪ್ಲೋಡ್ ಅಗುತ್ತಿದ್ದಂತೆಯೇ ಅಪ್ಪು ಅಭಿಮಾನಿಗಳು ಚಾರ್ಲಿ ವಿರುದ್ಧ ರೊಚ್ಚಿಗೆದ್ದಿದ್ದಾರೆ.

ಅಪ್ಪು ಸರ್ ಅವರನ್ನು ಗೌರವಿಸಿ. ಇಂತಹ ವೀಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ವೀಕ್ಷಕರನ್ನು ಮೂರ್ಖರನ್ನಾಗಿ ಮಾಡಬೇಡಿ ಎಂದಿದ್ದಾರೆ. ಮತ್ತೊಬ್ಬರು ನೀನು ಚೆನ್ನಾಗಿ ನಟನೆ ಮಾಡುತ್ತೀರಿ. ಹೀಗೆ ಹಲವಾರು ಕಾಮೆಂಟ್ ಗಳನ್ನು ಮಾಡುವ ಮೂಲಕ ಚಾರ್ಲಿಯನ್ನು ಪುನೀತ್ ಅಭಿಮಾನಿಗಳು ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ.