ಪುನೀತ್ ರಾಜ್‍ಕುಮಾರ್ ಗೆ ‘ಬಸವಶ್ರೀ ಪ್ರಶಸ್ತಿ’ ನೀಡುವುದಾಗಿ ಘೋಷಿಸಿದ ಮುರುಘಾ ಶ್ರೀ.

70
firstsuddi

ಚಿತ್ರದುರ್ಗ : ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮುರುಘಾ ಮಠದಿಂದ ನೀಡುವ, ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ನೀಡುವುದಾಗಿ ಡಾ.ಶಿವಮೂರ್ತಿ ಮುರುಘಾ ಶರಣರು ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟ ಅಪ್ಪುಗೆ ‘ಬಸವಶ್ರೀ ಪ್ರಶಸ್ತಿ’ಯನ್ನು ಮರಣೋತ್ತರವಾಗಿ ನೀಡಲು ಮುರುಘಾ ಮಠ ನಿರ್ಧರಿಸಿದೆ. ರಾಜ್ಯದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಬಸವಶ್ರೀ ಪ್ರಶಸ್ತಿಯು 5 ಲಕ್ಷ ರೂ. ನಗದು ಸೇರಿದಂತೆ ಬಸವಶ್ರೀ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಚಿತ್ರದುರ್ಗದ ಮುರುಘಾ ಮಠದಲ್ಲಿರುವ ಅನುಭವ ಮಂಟಪದಲ್ಲಿ ನಡೆಯಲಿದ್ದು, ಈ ಪ್ರಶಸ್ತಿಯನ್ನು ಬರುವ ಬಸವ ಜಯಂತಿ ದಿನ ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ಪ್ರದಾನ ಮಾಡಲಾಗುವುದು. ನಟ ಶಿವರಾಜಕುಮಾರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ನವೆಂಬರ್ 10ರಂದು ಪುನೀತ್ ಮನೆಗೆ ಮುರುಘಾ ಶ್ರೀಗಳು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.