ಪುನೀತ್ ಸಮಾಧಿಗೆ ನಮನ ಸಲ್ಲಿಸಿದ ನಟ ವಿಜಯ್ ದೇವರಕೊಂಡ.

57
firstsuddi

ಬಹುನಿರೀಕ್ಷಿತ ‘ಲೈಗರ್’ ಸಿನಿಮಾದ ಪ್ರಚಾರದ ಸಲುವಾಗಿ ಟಾಲಿವುಡ್ ನ ಖ್ಯಾತ ನಟ ವಿಜಯ್ ದೇವರಕೊಂಡ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಅವರು ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ನಟಿ ಅನನ್ಯಾ ಪಾಂಡೆ, ನಟ ವಿಶ್, ನಿರ್ದೇಶಕ ಜಗನ್ನಾಥ್ ಪೂರಿ ಸೇರಿದಂತೆ ಹಲವರು ಜೊತೆಗಿದ್ದರು.

ಲೈಗರ್ ಸಿನಿಮಾ ಆಗಸ್ಟ್ 25ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಲೈಗರ್ ಚಿತ್ರದಲ್ಲಿ ವಿಜಯ್ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ನಟಿಸಿದ್ದಾರೆ. ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರ ತಾಯಿ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಿದ್ದಾರೆ. ವಿಶ್ವ ವಿಖ್ಯಾತ ಬಾಕ್ಸರ್ ಮೈಕ್ ಟೈಸನ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳು ಧೂಳೆಬ್ಬಿಸಿವೆ.