ಪುನೀತ್ ಹುಟ್ಟುಹಬ್ಬ, ಜೇಮ್ಸ್ ಸಂಭ್ರಮಾಚರಣೆ ವೇಳೆ ಅಭಿಮಾನಿ ಹೃದಯಾಘಾತದಿಂದ ಸಾವು…

136
firstsuddi

ಮೈಸೂರು : ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬ ಹಾಗೂ ‘ಜೇಮ್ಸ್’ ಸಂಭ್ರಮಾಚರಣೆ ವೇಳೆ ಅಪ್ಪು ಅಭಿಮಾನಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ.

ಆಕಾಶ್ (22) ಮೃತಪಟ್ಟ ಅಭಿಮಾನಿ. ನಿನ್ನೆ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬ ಹಾಗೂ ಜೇಮ್ಸ್ ಸಿನಿಮಾ ಬಿಡುಗಡೆಯಾಗಿದ್ದರಿಂದ ಗ್ರಾಮದಲ್ಲಿ ಅದ್ಧೂರಿಯಾಗಿ ಸಂಭ್ರಮಾಚರಣೆ ಮಾಡಲಾಗುತ್ತಿತ್ತು. ಈ ವೇಳೆ ಆಕಾಶ್ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.