‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಪೊಲೀಸ್ ಬಂದೋಬಸ್ತ್…

62
firstsuddi

ಬೆಂಗಳೂರು : ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ಪರ್ವ’ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಅಕ್ಟೋಬರ್ 28ರಂದು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ರಿಲೀಸ್ ಆಗಲಿದ್ದು ಅದರ ಪ್ರೀ-ರಿಲೀಸ್ ಇವೆಂಟ್ ಗೆ ‘ಪುನೀತ ಪರ್ವ’ ಎಂದು ಹೆಸರು ಇಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲದೇ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಆಗಮಿಸಲಿದ್ದಾರೆ. ಹೀಗಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಂಜೆ 6 ಗಂಟೆಗೆ  ಕಾರ್ಯಕ್ರಮ ನಡೆಯಲಿದೆ.

ಈ ಕುರಿತು ಮಾಹಿತಿ ನೀಡಿರುವ ಡಿಸಿಪಿ ಶ್ರೀನಿವಾಸ್ ಗೌಡ, 1400 ಪೊಲೀಸರ್, 180 ಪಿಎಸ್ ಐ, 60 ಇನ್ಸ್ ಪೆಕ್ಟರ್, 14 ಎಸಿಪಿ ಹಾಗೂ 3 ಮಂದಿ ಡಿಸಿಪಿಗಳನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲದೇ, 20 ಕೆಎಸ್ ಆರ್ ಪಿ ತುಕಡಿ ಕೂಡ ಆ ಸ್ಥಳದಲ್ಲಿ ಇರಲಿದೆ. ಕಾರ್ಯಕ್ರಮವನ್ನು ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕೂಡ ಮಾಡಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.